ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪೂರ್ವ ಸಭೆಯನ್ನು ಕರೆಯಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನೀತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಪಿ.ಟಿಎ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸ್ವಾತಂತ್ರ್ಯೋತ್ಸವವನ್ನು ಎಲ್ಲರ ಸಹಕಾರದೊಂದಿಗೆ ನಡೆಸುವುದೆಂದು ತೀರ್ಮಾನಿಸಲಾಯಿತು. ಜೊತೆಗೆ ಎಲ್ಲರ ಒಗ್ಗೂಡುವಿಕೆಯಿಂದ ಒಂದು ದಿನ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲೂ ತೀರ್ಮಾನಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.
No comments:
Post a Comment