ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕಸಭಾ ಸದಸ್ಯರ ಅನುದಾನ ನಿಧಿಯಿಂದ ದೊರೆತ ಕಂಪ್ಯೂಟರ್ ಹಾಗೂ ಪ್ರೋಜೆಕ್ಟರನ್ನು ಮಾನ್ಯ ಕಾಸರಗೋಡು ಸಂಸದರಾದ ಪಿ. ಕರುಣಾಕರನ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು "ಮಾಹಿತಿ ತಂತ್ರಜ್ಞಾನವನ್ನು ಮಕ್ಕಳಲ್ಲಿ ಇನ್ನಷ್ಟು ಬಲಗೊಳಿಸಲು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ಕಂಪ್ಯೂಟರ್ ಹಾಗೂ ಪ್ರಾಜೆಕ್ಟ್ ಗಳನ್ನು ನೀಡುವುದರ ಮೂಲಕ ಶಿಕ್ಷಣ ಸಂಸ್ಥೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ" ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸದರನ್ನು ಶಾಲಾ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment