ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಕೇರಹದಲ್ಲುಂಟಾಗಿರುವ ಜಲಪ್ರಳಯದ ಸಂತಸ್ತರಿಗೆ ಸಹಾಯ ಧನ ಕೊಡುಗೆ ನೀಡುವ ಮೂಲಕ ಮಾನವೀಯ ಮೆರೆದರು.
ಈ ನಿಟ್ಟಿನಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಸಹಾಯ ಧನ ಸಂಗ್ರಹ ಪ್ರಕ್ರಿಯೆ ಕೈಗೊಂಡು ಸಂಗ್ರಹ ಮೊತ್ತವನ್ನು ಮುಖ್ಯಮಂತ್ರಿಯವರ ನೆರೆಪರಿಹಾರ ನಿಧಿಯ ಖಾತೆಗೆ ಶಾಲಾ ಉಪನಾಯಕನಾದ ಕಾರ್ತಿಕ್ ಕೆ ಯವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಪ್ರಬಂಧಕರಿಗೆ ಚೆಕ್ ಹಸ್ತಾಂತರ ಮಾಡುವ ಮೂಲಕ ನೆರವೇರಿಸಲಾಯಿತು. ನಿಧಿ ಸಂಗ್ರಹದ ಸಮಯದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ ಕೊಜಮುಕು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನಿತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ, ಪಿ.ಟಿ.ಎ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
No comments:
Post a Comment