FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday, 3 February 2019

ಊರ ಹಬ್ಬವಾದ ಶಾಲಾ ವಾರ್ಷಿಕೋತ್ಸವ

      ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
      ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವನ್ನು ಮೀಂಜ ಪಂಚಾಯತ್ ಅಧ್ಯಕ್ಷೆ ಶಂಶಾದ್  ಶುಕೂರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ, ಕುಂಬಳೆ ಪಂಚಾಯತಿನ ಉಪಾಧ್ಯಕ್ಷೆ ಗೀತಾ ಲೋಕನಾಥ್ ಶೆಟ್ಟಿ, ಕೆನರಾ ಬ್ಯಾಂಕಿನ ನಿವೃತ್ತ ಸೀನಿಯರ್ ಮೆನೇಜರ್ ಪದ್ಮನಾಭ ಶೆಟ್ಟಿ ಮಾಣೂರು ಕುಳೂರು, ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ಲೆಕ್ಚರರ್ ಬಾಲಕೃಷ್ಣ ಶೆಟ್ಟಿ ಎಲಿಯಾಣ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್ ಶೆಟ್ಟಿ ಎಲಿಯಾಣ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಕಲ್ಕಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಹಾಗೂ ಶಾಲೆಯ ಲೋಗೋ ವನ್ನು ರಚಿಸಿದ ಪ್ರವೀಣ್ ಕುಮಾರ್ ಚಿಗುರುಪಾದೆ ಯವರನ್ನು ಅಭಿನಂದಿಸಿ ಗೌರವಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಹಾಗೂ ಊರವರಿಗೆ ನಡೆಸಿದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.  ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ವಾರ್ಷಿಕ ವರದಿ ವಾಚಿಸಿದರು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಯಶಸ್ವೀ ಕಲಾವಿದರು ಮಂಜೇಶ್ವರ ಇವರಿಂದ 'ಏತ್ ಪಂಡಲಾ ಆತೆ' ಎನ್ನುವ ತುಳು ಹಾಸ್ಯಮಯ ನಾಾಟಕ ಪ್ರದರ್ಶನಗೊಂಡಿತು.





























No comments:

Post a Comment