ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಆರ್ ಶೆಟ್ಟಿ ಪೊಯ್ಯೆಲ್ ರವರಿಗೆ ಕುಳೂರಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಪಿ.ಟಿ.ಎ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘ ಹಾಗೂ ಪಿ.ಟಿ.ಎ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಪಿ.ಆರ್.ಶೆಟ್ಟಿ ಪೊಯ್ಯೆಲ್ ರವರು ಕುಳೂರು ಶಾಲಾ ಹಳೆ ವಿದ್ಯಾರ್ಥಿಯೂ ಆಗಿರುವರು.
No comments:
Post a Comment