ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಗ್ರಾಮ ಪಂಚಾಯತು, ಆಯುರ್ವೇದಿಕ್ ಆಸ್ಪತ್ರೆ ಮೀಂಜ ಹಾಗೂ ಹಳೆ ವಿದ್ಯಾರ್ಥಿ ಸಂಘ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಂಶಾದ್ ಶುಕೂರ್ ನೆರವೇರಿಸಿದರು. ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಶ್ರೀಮತ ಚಂದ್ರಾವತಿ ವಿ.ಪಿ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೀಂಜ ಆಯುರ್ವೇದಿಕ್ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಆದ ಡಾ. ರಾಜಾರಾಮ ಡಿ.ಕೆ ಶಿಬಿರದ ಮಾಹಿತಿ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಶಮ್ನಾ, ಕುಳೂರು ಶಾಲಾ ಶಿಕ್ಷಕಿ ಸೌಮ್ಯ ಪಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕೃಷ್ಣವೇಣಿ ಪಾದೆ ಕುಳೂರು, ಮಾಜಿ ವಾರ್ಡ್ ಸದಸ್ಯ ಬಾಲಪ್ಪ ಬಂಗೇರ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ವಂದಿಸಿದರು. ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ನಿರೂಪಣೆಗೈದರು. ಬಳಿಕ ಸಾರ್ವಜನಿಕರ ಆರೋಗ್ಯ ಪರೀಕ್ಷೆ ನಡೆಯಿತು. ಶಾಲಾ ಶಿಕ್ಷಕ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment