FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 6 June 2019

ಮೀಂಜ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ ಹಾಗೂ ಶಾಲಾಭಿವೃದ್ಧಿ ಕಾರ್ಯಗಳ ಉದ್ಘಾಟನೆ


        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಗ್ರಾಮ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ ವಿಜೃಂಭಣೆಯಿಂದ ನಡೆಯಿತು.
         ಕಾರ್ಯಕ್ರಮದಲ್ಲಿ ನವಾಗತ ಮಕ್ಕಳನ್ನು ಆಕರ್ಷಕ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಜೊತೆಗೆ ಕಲಿಕಾ ಕಿಟ್ ವಿತರಿಸಲಾಯಿತು. ಪ್ರವೇಶೋತ್ಸವದ ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯಿತಿನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೃಷ್ಣ ಕೊಮ್ಮಂಗಳ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಬಿ. ಆರ್. ಸಿ ತರಬೇತುದಾರ ಕೃಷ್ಣ ಪ್ರಕಾಶ್ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಳೂರು ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರೀ-ಪ್ರೈಮರಿ ಪಿ. ಟಿ. ಎ ಅಧ್ಯಕ್ಷ ಕಮಲಾಕ್ಷ ಕಲ್ಕಾರ್, ಬಿ.ಆರ್.ಸಿ ಯ ಮೋಹಿನಿ ಟೀಚರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲೆಗೆ ನೂತನವಾಗಿ ನಿರ್ಮಿಸಲ್ಪಟ್ಟ ಶೌಚಾಲಯವನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ಹಾಗೂ ಎಂ. ಎಲ್. ಎ ಫಂಡಿನಿಂದ ದೊರೆತ ಲ್ಯಾಪ್ಟಾಪ್ ಗಳನ್ನು ಶಿಕ್ಷಣ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷ ಕೃಷ್ಣ ಕೊಮ್ಮಂಗಳ ಉದ್ಘಾಟಿಸಿದರು. ಶಾಲಾ ಪಿ. ಟಿ. ಎ  ಕೊಡುಗೆಯಾಗಿ ನೀಡಿದ ತರಗತಿ ಅಡ್ಡಗೋಡೆ ಸ್ಕ್ರೀನನ್ನು  ಪಿ. ಟಿ.ಎ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು.

      ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಾಲಾ ಅಧ್ಯಾಪಕ  ಜಯಪ್ರಶಾಂತ್ ಪಾಲೆಂಗ್ರಿಯವರ ವತಿಯಿಂದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.






















No comments:

Post a Comment