ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯನ್ನು ಕರೆಯಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಪಿ. ಟಿ. ಎ ಮಾತೃ ಮಂಡಳಿಯ ಅಧ್ಯಕ್ಷೆ ಆಶಾಲತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಪಿ. ಟಿ. ಎ ಅಧ್ಯಕ್ಷ ಕಮಲಾಕ್ಷ ಕಲ್ಕಾರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. 2018-19 ನೇ ಸಾಲಿನ ವರದಿಯನ್ನು ಶಿಕ್ಷಕಿ ನಯನ ಯಂ ಮಂಡಿಸಿದರು. ಲೆಕ್ಕ ಪತ್ರವನ್ನು ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ನಡೆಸಿದ ತರಕಾರಿ ಕೃಷಿ ಹಾಗೂ ಇತರ ಆದಾಯ ಮೂಲಗಳಿಂದ ಗಳಿಸಿದ ಸುಮಾರು ಒಂದು ಲಕ್ಷಕ್ಕಿಂತಲೂ ಅಧಿಕ ಮೊತ್ತವನ್ನು ಶಾಲಾಭಿವೃದ್ಧಿಗೆ ವಿನಿಯೋಗಿಸಿದ ಶಾಲಾ ರಕ್ಷಕ-ಶಿಕ್ಷಕ ಸಂಘವನ್ನು ಅಭಿನಂದಿಸಲಾಯಿತು. ಜೊತೆಗೆ ಈ ಕಾರ್ಯದಲ್ಲಿ ಸಹಕರಿಸಿದ ಪೂರ್ವ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ 2019-20 ನೇ ಶೈಕ್ಷಣಿಕ ವರ್ಷದ ನೂತನ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಉಪಾಧ್ಯಕ್ಷರಾಗಿ ಕಮಲಾಕ್ಷ ಕಲ್ಕಾರ್ ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾಗಿ ಪ್ರೇಮ ಜಿ ಶೆಟ್ಟಿ, ಆಶಾಲತ ಕುಳೂರು, ಸೌಮ್ಯಲತ ಕುಳಿಂಜ, ಸುಪ್ರೀತ ಕುಳೂರು ಹೊಸಮನೆ, ರೇಷ್ಮ ಕುಳೂರು, ಹೇಮಲತಾ ಕುಳೂರು, ಸುನೀತಾ ಕುಳೂರು, ಫಾತಿಮತ್ ಝೌರ, ರಾಜಲಕ್ಷ್ಮಿ ದೇರಂಬಳ ಗುತ್ತು, ಸ್ವಾತಿ ದೇರಂಬಳ, ಲೀಲಾವತಿ, ಯೋಗ್ಯವತಿ, ಯಶೋಧ ಪೊಯ್ಯೆಲ್, ಪುಷ್ಪ ಕುಳೂರು, ಉದಯಕುಮಾರಿ ಕುಳೂರು ರವರು ಆಯ್ಕೆಯಾದರು. ಪಿ. ಟಿ. ಎ ಮಾತೃ ಮಂಡಳಿ ಅಧ್ಯಕ್ಷೆಯಾಗಿ ರಾಜಲಕ್ಷ್ಮಿ ದೇರಂಬಳ ಗುತ್ತು, ಉಪಾಧ್ಯಕ್ಷೆಯಾಗಿ ಸುಪ್ರೀತ ಕುಳೂರು ಹೊಸಮನೆ ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾಗಿ ಆಶಾಲತ ಕುಳೂರು, ಸುನೀತಾ ಕುಳೂರು, ಹರಿಣಾಕ್ಷಿ, ಗೀತಾ, ಬೇಬಿ, ರೂಪ, ಯಶೋಧ ಕುಳೂರು , ಝೈನಬ, ರೋಹಿಣಿ, ಕಮಲಾಕ್ಷಿ, ಶೋಭಾ, ಪುಷ್ಪಲತಾ, ಸುಹಾಸಿನಿ ಆಯ್ಕೆಯಾದರು. ಪ್ರೀ ಪ್ರೈಮರಿ ವಿಭಾಗದ ಪಿ.ಟಿ.ಎ ಅಧ್ಯಕ್ಷರಾಗಿ ಸತೀಶ್ ಎಲಿಯಾಣ ಆಯ್ಕೆಯಾದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment