ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನವಯುವಕ ಕಲಾವೃಂದ ಗ್ರಂಥಾಲಯ ಹಾಗೂ ಕುಳೂರು ಶಾಲೆಯ ನೇತೃತ್ವದಲ್ಲಿ ವಾಚನಾ ಪಕ್ಷಾಚರಣೆಯ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಅಹಮದ್ ಹುಸೈನ್ ಪಿ. ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಣ್ಣೂರು ವಿಶ್ವ ವಿದ್ಯಾನಿಲಯದಿಂದ ಎಂ. ಫಿಲ್ ಪದವಿ ಪಡೆದ ಮೀನಾಕ್ಷಿ ಬೊಡ್ಡೋಡಿ ಯವರನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ಸನ್ಮಾನಿಸಿದರು. ವಾಚನಾ ಪಕ್ಷಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮಾ ಉಪಸ್ಥಿತರಿದ್ದರು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಜೊತೆ ಕಾರ್ಯದರ್ಶಿ ಡಿ. ಕಮಲಾಕ್ಷ ಸ್ವಾಗತಿಸಿ, ಶಾಲಾ ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.

No comments:
Post a Comment