ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 73 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ 'ಸ್ವತಂತ್ರ ಭಾರತವು ಹಲವಾರು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ಆದರೂ ಭಾರತ ಇನ್ನೂ ಅಭಿವೃದ್ಧಿಯನ್ನು ಕಾಣಬೇಕಾದರೆ ಬಡತನ ನಿರ್ಮೂಲನೆ, ಅಸಮಾನತೆಯನ್ನು ಹೊರಗಟ್ಟುವಿಕೆ, ಮಾದಕವಸ್ತುಗಳಿಂದ ಮಕ್ಕಳು ಹಾಗೂ ಯುವ ಜನತೆಯನ್ನು ದೂರ ಇಡುವುದು ಮೊದಲಾದ ಕಾರ್ಯಗಳು ನಡೆಯಬೇಕಾಗಿದೆ' ಎಂದು ಕರೆಯಿತ್ತರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯಲ್, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷರಾದ ಸತೀಶ್ ಎಲಿಯಾಣ ಉಪಸ್ಥಿತರಿದ್ದು ಶುಭ ಕೋರಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಭಿಕರ ಪರವಾಗಿ ನಾರಾಯಣ ನೈಕ್ ನಡುಹಿತ್ಲು, ಮೀನಾಕ್ಷಿ ಬೊಡ್ಡೋಡಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಹರಿರಾಮ ಕುಳೂರು ಶುಭ ಕೋರಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಶಾಲಾ ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

No comments:
Post a Comment