ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯ ಮಾಹಿತಿ ತಂತ್ರಜ್ಞಾನ ವಿಭಾಗದಿಂದ ದೊರೆತ ಲ್ಯಾಪ್ಟಾಪ್ ಹಾಗೂ ಪ್ರೋಜೆಕ್ಟರ್ ನ ಉದ್ಘಾಟನಾ ಸಮಾರಂಭ ನಡೆಯಿತು.
ಲ್ಯಾಪ್ಟಾಪ್ ಹಾಗೂ ಪ್ರೋಜೆಕ್ಟರ್ ನ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ನೆರವೇರಿಸಿ 'ಶಿಕ್ಷಣ ಇಲಾಖೆ ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸುವ ಮೂಲಕ ಮಹತ್ತರವಾದ ಹೆಜ್ಜೆ ಇಡುತ್ತಿದ್ದು, ಕೇರಳದ ಶಿಕ್ಷಣ ರಂಗದಲ್ಲಿ ಮತ್ತಷ್ಟು ಆಮೂಲಾಗ್ರ ಬದಲಾವಣೆ ಆಗಲಿದೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರೀತ ಕುಳೂರು ಹೊಸಮನೆ, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಪಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ನಯನ ಎಂ ಬುಲ್ ಬುಲ್ ನ ಕುರಿತು ಮಾಹಿತಿ ನೀಡಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment