ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 115 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ವಿಶೇಷ ಅಸೆಂಬ್ಲಿ ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರಿಗೆ ಹಾಗೂ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಟ್ಟರು. ರಸಪ್ರಶ್ನೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರೀತ ಕುಳೂರು ಹೊಸಮನೆ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಉಪಸ್ಥಿತರಿದ್ದು ಶುಭ ಕೋರಿದರು. ಬಳಿಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಶುಚಿತ್ವ ಕಾರ್ಯಕ್ರಮ ನಡೆಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯ ಜಯರಾಮ್ ರೈ ಎಲಿಯಾಣ (ಮಾಲಕರು, ಶ್ರೀ ದುರ್ಗಾ ಜನರಲ್ ಸ್ಟೋರ್, ಚಿಗುರುಪಾದೆ) ರವರು ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಿದರು.

No comments:
Post a Comment