FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday, 2 February 2020

ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟ

         ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಗೆ, ಮಕ್ಕಳ ಹೆತ್ತವರಿಗೆ ಹಾಗೂ ಊರವರಿಗೆ ಕ್ರೀಡಾಕೂಟ ನಡೆಯಿತು.
         ಕ್ರೀಡಾಕೂಟವನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ಉದ್ಘಾಟಿಸಿ 'ಕ್ರೀಡೆಯು ನಮ್ಮ ದೈಹಿಕ ಹಾಗೂ ಮಾನಸಿಕ ಸಮತೋಲನಕ್ಕೆ ಉತ್ತಮ ಮಾರ್ಗ, ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸಲು ಸಾಧ್ಯವಿದೆ' ಎಂದರು. ಕ್ರೀಡಾಕೂಟಕ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ  ಶುಭ ಹಾರೈಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಬಳಿಕ ವಿವಿಧ ವಿಭಾಗಗಳಲ್ಲಿ ಹಲವಾರು ಸ್ಪರ್ಧೆಗಳು ನಡೆದವು.

















1 comment: