FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 8 February 2020

ಸಂಭ್ರಮ ಸಡಗರದಿಂದ ನಡೆದ ಶಾಲಾ ವಾರ್ಷಿಕೋತ್ಸವ

          ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವು ಸಂಭ್ರಮ, ಸಡಗರದಿಂದ ನಡೆಯಿತು.
ಬೆಳಗ್ಗೆ ನಡೆದ ಧ್ವಜಾರೋಹಣವನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ನಡೆಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆದವು.
          ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಜೇಶ್ವರ ವಿಧಾನ ಸಭಾ ಶಾಸಕರಾದ ಎಂ. ಸಿ ಖಮರುದ್ದೀನ್ ರವರು 'ಸಾರ್ಥಕ ಜೀವನ ನಡೆಸಲು ನಮ್ಮಲ್ಲಿರುವ ಸ್ನೇಹಾಚಾರಗಳೇ ಅತೀ ಮುಖ್ಯ, ಯಾವುದೇ ಭೇದ ಭಾವ ಇಲ್ಲದೆ ಒಂದೇ ಮನಸ್ಸಿನಿಂದ ಮುಂದೆ ಸಾಗಿದಾಗ ದೇಶವೇ ಅಭಿವೃದ್ಧಿಯಾಗುವುದು. ಎಲ್ಲರೂ ಸೇರಿಕೊಂಡು ಆಚರಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಮತ್ತು ಅಖಂಡತೆಯನ್ನು ಮೂಡಿಸುತ್ತದೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಸರಗೋಡು ಜಿಲ್ಲಾ ಪಂಚಾಯಿತಿನ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಆಶಾಲತ ಬಿ. ಎಂ, ಮೀಂಜ ಪಂಚಾಯತಿನ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಶೋಭಾ ಸೋಮಪ್ಪ, ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್ ಆಗಮಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿಗಳಾದ ಕುಳೂರು ಕನ್ಯಾನ ಚಂದ್ರಹಾಸ ಶೆಟ್ಟಿ, ಮೂಡುಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢ ಶಾಲೆಯ ಸಿಬ್ಬಂದಿ ರಾಮ ಕೆ ಕುಳೂರು, ಶಕುಂತಲಾ ಬಿ ಶೆಟ್ಟಿ ಪೊಯ್ಯೇಲ್, ಮೋಹನ್ ದಾಸ್ ಶೆಟ್ಟಿ ಪೊಯ್ಯೇಲ್, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಪ್ರೀ ಪ್ರೈಮರಿ ವಿಭಾಗದ ಪಿ. ಟಿ. ಎ ಅಧ್ಯಕ್ಷ ಸತೀಶ್ ಎಲಿಯಾಣ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ವಾರ್ಷಿಕ ವರದಿ ವಾಚಿಸಿದರು. ಇದೇ ಸಂದರ್ಭದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಶಾಲಾ ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಯಶಸ್ವೀ ಕಲಾವಿದರು, ಮಂಜೇಶ್ವರ ಇವರಿಂದ 'ದೂರ ದೀವೊಡ್ಚಿ' ಎಂಬ ತುಳು ನಾಟಕ ಪ್ರದರ್ಶನಗೊಂಡಿತು.








No comments:

Post a Comment