FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 12 June 2020

ಆನ್ಲೈನ್ ತರಗತಿಗೆ ಪರಿಹಾರ ಮತ್ತು ದುರಂತ ನಿವಾರಣಾ ಸಮಿತಿ ರಚನೆ

        ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ನಡೆಯುತ್ತಿರುವ ಆನ್ಲೈನ್ ತರಗತಿಯ ಲಭ್ಯತೆಯ ಕುರಿತು ಮಾಹಿತಿ ಪಡೆಯಲು ಹಾಗೂ ವ್ಯವಸ್ಥೆ ಇಲ್ಲದ ಮಕ್ಕಳಿಗೆ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲು ಇಂದು ಶಾಲೆಯಲ್ಲಿ ಸಭೆ ಸೇರಲಾಯಿತು. ಈ ಸಭೆಯನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಲಕ್ಷ್ಮಿ ದೇರಂಬಳ ಗುತ್ತು, ಪ್ರೀ ಪ್ರೈಮರಿ ವಿಭಾಗದ ಪಿ. ಟಿ. ಎ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಉಪಸ್ಥಿತರಿದ್ದರು. ಸಭೆಯಲ್ಲಿ ಆನ್ಲೈನ್ ತರಗತಿಯ ವೀಕ್ಷಣೆಗೆ ವ್ಯವಸ್ಥೆ ಇಲ್ಲದ ಮಕ್ಕಳ ರಕ್ಷಕರು ಹಾಜರಿದ್ದರು. ಜೊತೆಗೆ ಕುಟುಂಬಶ್ರೀ ಘಟಕದ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ರಕ್ಷಕ-ಶಿಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಒಂದು ಸಮಿತಿ ರೂಪೀಕರಣ ಮಾಡಲಾಯಿತು. ಅಧ್ಯಕ್ಷರಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ, ಉಪಾಧ್ಯಕ್ಷರಾಗಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಕನ್ವೀನರ್ ಆಗಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಸಮಿತಿಯಲ್ಲಿ ಪಿ. ಟಿ. ಎ, ಹಳೆ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಯ ಪ್ರತಿನಿಧಿಗಳು, ಕುಟುಂಬಶ್ರೀಯ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
             ಆ ನಂತರ ನಡೆದ ದುರಂತ ನಿವಾರಣಾ ಸಮಿತಿ ರೂಪೀಕರಣ ಸಭೆಯಲ್ಲಿ ಸಮಿತಿ ರೂಪೀಕರಣ ಮಾಡಲಾಯಿತು. ಎಲ್ಲಾ ಅಂಗ ಸಂಸ್ಥೆಗಳ ಪ್ರತಿನಿಧಿಗಳು ಒಳಗೊಂಡಿರುವ ಸಮಿತಿಯನ್ನು ರಚಿಸಲಾಯಿತು.
           ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು.




No comments:

Post a Comment