FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 15 August 2020

74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

          ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

          ಕೊರೋನ ಮಹಾಮಾರಿಯಿಂದಾಗಿ ತತ್ತರಿಸಿರುವ ಜನತೆಯ ಸುರಕ್ಷತಾ ದೃಷ್ಠಿಯಿಂದ ಈ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಕಾರದ ಆದೇಶದಂತೆ ಕೆಲವೇ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಮಕ್ಕಳೇ ಇಲ್ಲದೆ ವಿದ್ಯಾದೇಗುಲವು ಪ್ರಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸುವಂತಾಯಿತು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿಕೊಂಡು ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. 

         ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಕಮಲಾಕ್ಷ ಕಲ್ಕಾರ್, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಉಪಾಧ್ಯಕ್ಷೆ ಸುಪ್ರೀತ ಕುಳೂರು ಪಾದೆ, ಪ್ರೀ  ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಉಪ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಹರಿರಾಮ ಕುಳೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಘಟಿಸಿದರು. ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.







No comments:

Post a Comment