ಶಾಲಾರಂಭವಾಗಿ ಒಂದು ತಿಂಗಳು ಕಳೆದ ಬಳಿಕ ಇಂದು ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆಯನ್ನು ಕರೆಯಲಾಯಿತು. ಕಳೆದ ಒಂದು ತಿಂಗಳಲ್ಲಿ ನಡೆದ ಶಾಲಾ ಚಟುವಟಿಕೆಗಳ ಕುರಿತು ಅವಲೋಕನ ಮಾಡಲಾಯಿತು. ಮಕ್ಕಳಿಗೆ ಮಾಡಿದ ಶಾಲಾ ವಾಹನದ ವ್ಯವಸ್ಥೆ ಹಾಗೂ ಮಧ್ಯಾಹ್ನದೂಟದ ಖರ್ಚು ವೆಚ್ಚಗಳನ್ನು ಸಭೆಯ ಮುಂದಿಡಲಾಯಿತು. ಆದಾಯಕ್ಕಿಂತ ಖರ್ಚು ಹೆಚ್ಚಾಗಿರುವುದನ್ನು ಮನಗಂಡು ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಮುಂಬರುವ ದಿನಗಳಲ್ಲಿ ಸಹಕಾರ ನೀಡುವ ಬಗ್ಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಭರವಸೆ ನೀಡಿದರು. ಚರ್ಚೆಯಲ್ಲಿ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಪರವಾಗಿ ಶಾಲಾ ಪಿ.ಟಿ.ಎ ಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಮಾತೃ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಪ್ರೇಮ ಜಿ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಸತ್ಯನಾರಾಯಣ ಶರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
Very proud of u ...
ReplyDelete