FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 26 January 2022

73 ನೇ ಗಣರಾಜ್ಯೋತ್ಸವ ಆಚರಣೆ

           ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

           ಕೋರೋನ ಕಾರಣದಿಂದ ಈ ವರ್ಷವೂ ಗಣರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಇದರಂಗವಾಗಿ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾನ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಮಾತೆಯರ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಫುಲ್ಲ ಕುಮಾರಿ ಪೊಯ್ಯೆಲ್, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.




Saturday 15 January 2022

ತರಕಾರಿ ಕೃಷಿಗೆ ಗೊಬ್ಬರ ನೀಡಿ ಸಹಕಾರ

        ಶಾಲಾ ತರಕಾರಿ ಕೃಷಿಗೆ ಒಂದು ಗೋಣಿ ಆಡಿನ ಜೈವಿಕ ಗೊಬ್ಬರವನ್ನು ಶಾಲಾ ಹಳೆ ವಿದ್ಯಾರ್ಥಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ನೀಡಿ ಸಹಕರಿಸಿದರು. ಇವರಿಗೆ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇವೆ.



ಶಾಲಾ ತರಕಾರಿ ತೋಟದಲ್ಲಿ ಶ್ರಮದಾನ

          ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಇಂದು ಶಾಲಾ ತರಕಾರಿ ತೋಟದಲ್ಲಿ ಶ್ರಮದಾನ ನಡೆಯಿತು.

          ಇಂದಿನ ಶ್ರಮದಾನದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಸದಸ್ಯರಾದ ಸುಪ್ರೀತಾ ಕುಳೂರು ಹೊಸಮನೆ, ರೂಪ ಪಾದೆ ಕುಳೂರು ಭಾಗವಹಿಸಿದರು. ಜೊತೆಗೆ ಶಾಲಾ ಪರಿಸರವನ್ನೂ ಶುಚಿಗೊಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲಾ ಪರವಾಗಿ ಧನ್ಯವಾದ ಸಮರ್ಪಿಸಲಾಯಿತು.