ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ, ಮಕ್ಕಳ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ವಿದ್ಯಾರಂಗ ಸಾಹಿತ್ಯ ವೇದಿಕೆ ಹಾಗೂ ಬಾಲ ಸಭೆಯ ಉದ್ಘಾಟನೆಯು ನಡೆಯಿತು.
ಕಾರ್ಯಕ್ರಮವನ್ನು ಶಾಲಾ ಹಳೆ ವಿದ್ಯಾರ್ಥಿನಿ ಹಾಗೂ ಹಲವು ಲೇಖನಗಳು ಹಾಗೂ ಕವಿತೆಗಳನ್ನು ಬರೆದು, ಸಾಹಿತ್ಯದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ ಶಕುಂತಲಾ ಬಿ ಶೆಟ್ಟಿ ಪೊಯ್ಯೆಲ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ, ಶಾಲಾ ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್ ಉಪಸ್ಥಿತರಿದ್ದರು. ಶಾಲಾ ಗ್ರಂಥಾಲಯಕ್ಕೆ ಶಕುಂತಲಾ ಶೆಟ್ಟಿ ಪೊಯ್ಯೆಲ್ ರವರು ತಮ್ಮಲ್ಲಿದ್ದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭದಲ್ಲಿ ವಾಚನಾ ವಾರಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ನಯನ ಎಂ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ನಿರೂಪಿಸಿದರು. ಶಿಕ್ಷಕಿಯರಾದ ಅಶ್ವಿನಿ ಎಂ ಹಾಗೂ ಚೇತನ ಸಹಕರಿಸಿದರು. ಬಳಿಕ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.
No comments:
Post a Comment