ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮರವರು ಚಾಲನೆ ನೀಡಿದರು.
ಶಾಲಾ ಪರಿಸರದಲ್ಲಿ ವಿವಿಧ ಗಿಡಗಳನ್ನು ನೆಟ್ಟು, ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲಾಯಿತು. ಶಾಲಾ ಮಕ್ಕಳು, ಅಧ್ಯಾಪಕ ವೃಂದ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಕೃಷಿ ಭವನದಿಂದ ದೊರೆದ ವಿವಿಧ ಜಾತಿಯ ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಟ್ಟರು. ಜೊತೆಗೆ ಸ್ಥಳೀಯರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ದೇವದಾಸ್ ಶೆಟ್ಟಿ ಚಾರ್ಲ ಹಾಗೂ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣರವರು ನೀಡಿದ ಬಾಳೆಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಕಾರ್ಯದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಹರಿರಾಮ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಹಾಗೂ ಜಯರಾಜ್ ಶೆಟ್ಟಿ ಚಾರ್ಲ ಕೈ ಜೋಡಿಸಿ ಸಹಕರಿಸಿದರು. ಇವರೆಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಲಾಯಿತು.
ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಶಾಲಾ ಹಿತೈಷಿಗಳಾದ ಚಂದ್ರಹಾಸ ರೈ ಕುಳೂರು ಹೊಸಮನೆ ಹಾಗೂ ಜಯರಾಜ್ ಶೆಟ್ಟಿ ಚಾರ್ಲರವರು ನೀಡಿದ ಸಿಹಿತಿಂಡಿಗಳನ್ನು ಶಾಲಾ ಮಕ್ಕಳಿಗೆ ಹಂಚಲಾಯಿತು.
No comments:
Post a Comment