ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ಮಕ್ಕಳ ಆಕರ್ಷಕ ಮೆರವಣಿಗೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ನೆರವೇರಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಜನಾರ್ದನ ಪೂಜಾರಿಯವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣರವರು ವಹಿಸಿದ್ದರು. ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣ ನೈಕ್ ನಡುಹಿತ್ಲು, ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್, ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಸದಸ್ಯರಾದ ಹರಿರಾಮ ಕುಳೂರು ಮೊದಲಾದವರು ಶುಭ ಹಾರೈಸಿದರು. ಪ್ರತಿಭಾ ಹರೀಶ್ ನಾಯಕ್ ಕುಳಬೈಲುರವರು ದೇಶಭಕ್ತಿ ಗೀತೆ ಹಾಡುವ ಮೂಲಕ ಗಮನ ಸೆಳೆದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಅಶ್ವಿನಿ ಎಂ ಹಾಗೂ ಚೇತನ ಕುಳೂರು ಸಹಕರಿಸಿದರು.
ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಎಲ್ಲರಿಗು ಲಘು ಉಪಹಾರ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.
No comments:
Post a Comment