ಕನ್ನಡ ಭಾಷೆ, ಸಂಸ್ಕೃತಿಯ ಕುರಿತು ಮಕ್ಕಳಲ್ಲಿ ಒಲವು ಹಾಗೂ ಅರಿವನ್ನು ಮೂಡಿಸುವ ಉದ್ದೇಶದಿಂದ ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ನಾಡ ಹಬ್ಬವನ್ನು ಆಚರಿಸಲಾಯಿತು.
ಆ ಪ್ರಯುಕ್ತ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ಬಳಿಕ ಕನ್ನಡ ಸಾರಸ್ವತ ಲೋಕದಲ್ಲಿ ತನ್ನದೇ ರೀತಿಯ ಛಾಪನ್ನು ಮೂಡಿಸಿದ ಜಾನಪದ ಹಾಡುಗಳನ್ನು ಹಾಡುವುದರೊಂದಿಗೆ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ನೃತ್ಯವನ್ನು ಮಾಡಲಾಯಿತು. ಎಲ್ಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡರು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
No comments:
Post a Comment