ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 153 ನೇ ಜನ್ಮದಿನಾಚರಣೆ ಹಾಗೂ ಭಾರತದ ಎರಡನೇ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 118 ನೇ ಜನ್ಮ ದಿನಾಚರಣೆಯನ್ನು ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ನಡೆಸಲಾಯಿತು.
ಆ ಪ್ರಯುಕ್ತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಬಳಿಕ ಶಾಲಾ ಪರಿಸರ ಶುಚೀಕರಣ ನಡೆಸಲಾಯಿತು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.
No comments:
Post a Comment