ಕೇರಳವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕರಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಮಿಂಚಿದ ಶಾಲಾ ಪ್ರತಿಭೆಗಳಿಗೆ ಸರ್ಟಿಫಿಕೇಟ್ ನೀಡುವುದರೊಂದಿಗೆ ಅಭಿನಂದನೆ ಸಲ್ಲಿಸಲಾಯಿತು. ವೃತ್ತಿ ಪರಿಚಯ ಮೇಳದಲ್ಲಿ ಉಪ ಜಿಲ್ಲೆಯಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.
ಬಳಿಕ ಶಾಲಾ ಶಿಕ್ಷಕಿ ಸೌಮ್ಯ ಪಿ ಹಾಗೂ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ರವರು ರಕ್ಷಕರಿಗೆ ಮಾದಕವಸ್ತು ಮುಕ್ತ ಕೇರಳ ಅಭಿಯಾನದ ಅಂಗವಾಗಿ ವಿಶೇಷ ತರಗತಿಯನ್ನು ನಡೆಸಿಕೊಟ್ಟರು.
ಶಾಲಾ ಶಿಕ್ಷಕಿ ಅಶ್ವಿನಿ ಎಂ ಸ್ವಾಗತಿಸಿ, ಶಿಕ್ಷಕಿ ಚೇತನ ವಂದಿಸಿದರು. ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
No comments:
Post a Comment