ಕುಳೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಉಪಾಧ್ಯಕ್ಷರಾದ ಶ್ರೀಯುತ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಂಬರುವ ಮಕ್ಕಳ ದಿನಾಚರಣೆ, ಶಾಲಾ ಶತಮಾನೋತ್ಸವ ಸಮಿತಿ ರೂಪೀಕರಣದ ಸಭೆ ಮೊದಲಾದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸೇರಿದ್ದ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.
No comments:
Post a Comment