FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 1 November 2022

ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞಾ ಸ್ವೀಕಾರ ; ಮಾನವ ಸರಪಳಿ ರಚನೆ

            ಕೇರಳ ರಾಜ್ಯವೂ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಮಾದಕ ವಸ್ತುಗಳ ಬಳಕೆ ಹಲವು ಸಮಸ್ಯೆಗಳನ್ನು ತರುತ್ತಿದೆ. ಇದರ ವಿರುದ್ಧ ಹೋರಾಡಲು, ಕೇರಳವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರ ಭಾಗವಾಗಿ ಇಂದು ನಮ್ಮ ಕುಳೂರು ಶಾಲೆಯಲ್ಲಿ ಮಾದಕವಸ್ತು ವಿರುದ್ಧ ಪ್ರತಿಜ್ಞೆ ಸ್ವೀಕರಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ರವರು ಪ್ರತಿಜ್ಞೆ ಬೋಧಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ರವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಕ್ಕಳಿಗೆ ತಿಳಿಸಿದರು. 

      ಬಳಿಕ ಮಕ್ಕಳ ಮಾನವ ಸರಪಳಿ ರಚಿಸಿ, ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಲು ಪಣ ತೊಡಲಾಯಿತು. ಮಾದಕ ವಸ್ತುಗಳ ವಿರುದ್ಧ ಘೋಷಣೆ ಕೂಗಲಾಯಿತು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಯೋಜಿಸಿದರು.













No comments:

Post a Comment