ಕೇರಳ ಶಾಲಾ ಪಠ್ಯಕ್ರಮದ ಪರಿಷ್ಕರಣೆಯ ಭಾಗವಾಗಿ ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಚರ್ಚೆ ನಡೆಯಿತು.
ಈ ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ದನ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮ ರವರು ಚರ್ಚಾ ಕೂಟವನ್ನು ನಡೆಸಿಕೊಟ್ಟರು. ರಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಈ ಚರ್ಚಾ ಕೂಟದಲ್ಲಿ ಭಾಗವಹಿದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.
No comments:
Post a Comment