ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಜನಾರ್ದನ ಪೂಜಾರಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ ಉಪಸ್ಥಿತರಿದ್ದರು. ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನಿತಾ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಕೃಷ್ಣವೇಣಿ ಪಾದೆ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ವೇಳೆ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಮಿಂಚಿದ ಪ್ರತಿಭೆಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಜೊತೆಗೆ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಸ್ವಾಗತಿಸಿ, ಶಾಲಾ ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮಕ್ಕಳು ತಮ್ಮ ಹೆತ್ತವರು ಹಾಗೂ ಅಧ್ಯಾಪಕರು ಪ್ರದರ್ಶಿಸಿದ ವೈವಿಧ್ಯಮಯ ಕಾರ್ಯಕ್ರಮವನ್ನು ನೋಡಿ ಆನಂದಿಸಿ ಸಂಭ್ರಮ ಪಟ್ಟರು. ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶವನ್ನು ಹೊತ್ತು ತಂದ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಅಭಿನಯಿಸಿದ ತುಳು ಹಾಸ್ಯಮಯ ಕಿರು ನಾಟಕ 'ಗೋಸ್ಬರಿ' ಎಲ್ಲರ ಮನ ಸೂರೆಗೊಂಡಿತು. ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ರಕ್ಷಕರು ಸಹಕರಿಸಿದರು.
ಪ್ರತೀ ವರ್ಷ ಮಕ್ಕಳ ದಿನಾಚರಣೆಯಂದು ಮಕ್ಕಳು ಕಾರ್ಯಕ್ರಮ ನೀಡುತ್ತಿದ್ದು, ಈ ವರ್ಷ ಮಕ್ಕಳ ಹೆತ್ತವರು ಹಾಗೂ ಶಿಕ್ಷಕ ವೃಂದ ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಮಕ್ಕಳ ಮನಸ್ಸನ್ನು ಗೆದ್ದು, ಮಕ್ಕಳ ದಿನಾಚರಣೆಗೆ ಇನ್ನಷ್ಟು ಮೆರುಗನ್ನು ನೀಡಿದರು.
No comments:
Post a Comment