FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday, 26 February 2023

ಮಕ್ಕಳ ಆಟದ ಉದ್ಯಾನವನ ಉದ್ಘಾಟನೆ; ಶತಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಕ್ಲಾಸ್ ಲೈಬ್ರರಿ ಉದ್ಘಾಟನೆ:

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಆಟದ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

        ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕರಾದ ಎ. ಕೆ. ಎಂ ಅಶ್ರಫ್ ಉದ್ಘಾಟಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೇರಂಬ ಇಂಡಸ್ಟ್ರೀಸ್ ನ ಸ್ಥಾಪಕಾಧ್ಯಕ್ಷರು, ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ, ಆಟದ ಉದ್ಯಾನವನವನ್ನು ಕೊಡುಗೆ ನೀಡಿದ ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
          ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಮಂಜೇಶ್ವರ ಬಿ. ಆರ್. ಸಿ ಯ ತರಬೇತುದಾರರಾದ ಮೋಹಿನಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉಪಸ್ಥಿತರಿದ್ದರು.
      ಮಂಜೇಶ್ವರದ ಶಾಸಕರಾದ ಎ. ಕೆ. ಎಂ ಅಶ್ರಫ್ ಹಾಗೂ ಶಾಲಾ ಮಕ್ಕಳಿಗೆ ಆಕರ್ಷಕವಾದ ಆಟದ ಉದ್ಯಾನವನವನ್ನು ಒದಗಿಸಿದ ಮೋಹನ್ ಶೆಟ್ಟಿ ಮಜ್ಜಾರ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.
       ಇದೇ ಸಂದರ್ಭದಲ್ಲಿ ಮಂಜೇಶ್ವರ ಶಾಸಕರು ವಾಚನಾ ಮಿತ್ರತ್ವ ಕಾರ್ಯಕ್ರಮದಂಗವಾಗಿ ಮೀಂಜ ಪಂಚಾಯತು ಮಟ್ಟದ ಮಾದರಿ ಶಾಲೆಯಾಗಿ ಆಯ್ಕೆ ಮಾಡಿದ ಕುಳೂರು ಶಾಲೆಯಲ್ಲಿ ಪ್ರತೀ ತರಗತಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು ಕೊಡುಗೆ ನೀಡಿದ ತರಗತಿ ಗ್ರಂಥಾಲಯದ ವ್ಯವಸ್ಥೆಯನ್ನು  ಉದ್ಘಾಟಿಸಿ, ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
       ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.


















No comments:

Post a Comment