ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕಾ ಪ್ರದರ್ಶನ ಕಾರ್ಯಕ್ರಮವಾಗಿ ಕಲಿಕೋತ್ಸವ 2022-23 ನಡೆಯಿತು.
ಕಾರ್ಯಕ್ರಮವನ್ನು ಮಂಜೇಶ್ವರ ಬಿ. ಆರ್. ಸಿ. ಯ ತರಬೇತುದಾರರಾದ ಮೋಹಿನಿ ರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತ ಕುಳೂರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಭಾಷೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿನಿ ಕುಮಾರಿ ತನ್ವಿ ಎಸ್ ಪೂಜಾರಿ ಹಾಗೂ ರಕ್ಷಕರ ವಿಭಾಗದಲ್ಲಿ ಆಯ್ಕೆಯಾದ ಪ್ರತಿಭಾ ಹರೀಶ್ ನಾಯಕ್ ಕುಳಬೈಲು ಇವರನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕಿ ಚೇತನ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಂ ವಂದಿಸಿದರು. ಶಾಲಾ ಶಿಕ್ಷಕಿ ನಯನ ಎಂ ಕಾರ್ಯಕ್ರಮವನ್ನು ನಿರೂಪಿಸಿದರು.
ಬಳಿಕ ಪ್ರತೀ ತರಗತಿಯ ಮಕ್ಕಳಿಂದ ಕಲಿಕಾ ಪ್ರದರ್ಶನ ನಡೆಯಿತು. ಶಾಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment