ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ಊರ ಕ್ರೀಡಾಭಿಮಾನಿಗಳಿಗೆ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಿದರು. ಜೊತೆಗೆ ಮಾದಕವಸ್ತು ಮುಕ್ತ ಕೇರಳ ಅಭಿಯಾನದ ಅಂಗವಾಗಿ ನಡೆಸಿದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು. ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲ್, ಕ್ರೀಡಾ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಸಿ ಚಿನಾಲ, ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ, ಡಾ. ಕೃಷ್ಣ ಭಟ್ ಚಿಗುರುಪಾದೆ ಉಪಸ್ಥಿತರಿದ್ದರು.
ಬಳಿಕ ಕುಳೂರು ಶಾಲಾ ವಠಾರದಲ್ಲಿ ವಿವಿಧ ಆಟೋಟ, ಮನೋರಂಜನಾ ಸ್ಪರ್ಧೆಗಳು ನಡೆದವು. ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ, ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ವೇದಿಕೆ ಸಮಿತಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಪೊಯ್ಯೇಲ್, ಕ್ರೀಡಾ ಸಮಿತಿಯ ಕಾರ್ಯದರ್ಶಿ ರಫೀಕ್ ಪೊಯ್ಯೇಲ್, ಹಣಕಾಸು ಸಮಿತಿಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಎಲಿಯಾಣ, ಪ್ರಚಾರ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುಳೂರು, ಆಹಾರ ಸಮಿತಿಯ ಕಾರ್ಯದರ್ಶಿ ರಾಜೇಶ್ ಸೇನವ ನಾರ್ಣಹಿತ್ಲು, ಸ್ವಾಗತ ಸಮಿತಿಯ ಕಾರ್ಯದರ್ಶಿ ಪ್ರೇಮ ಜಿ ಶೆಟ್ಟಿ ಹಾಗೂ ಶಾಲಾ ಶಿಕ್ಷಕ ವೃಂದ ನೇತೃತ್ವ ನೀಡಿದರು.
No comments:
Post a Comment