FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday, 19 June 2023

ವಾಚನ ದಿನಾಚರಣೆ:

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ಗ್ರಂಥಾಲಯ ಪಿತಾಮಹ ಪಿ. ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನ ದಿನಾಚರಣೆಯಾಗಿ ಆಚರಿಸಲಾಯಿತು.

         ಕಾರ್ಯಕ್ರಮವನ್ನು ಬರಹಗಾರ, ಮೀಯಪದವು ಉನ್ನತ ಪ್ರೌಢ ಶಾಲೆಯ ಪ್ರಾಧ್ಯಾಪಕ ಶ್ರೀ ಹರೀಶ್ ಜಿ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು, ನಿವೃತ್ತ ಶಾಲಾ ಮುಖ್ಯ ಶಿಕ್ಷಕ ಶ್ರೀ ಸತ್ಯನಾರಾಯಣ ಶರ್ಮ ಪಿ ಆಗಮಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಪೊಯ್ಯೇಲ್, ಶತಮಾನೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು. 

         ಇದೇ ಸಂದರ್ಭದಲ್ಲಿ ಶಾಲಾ ಗ್ರಂಥಾಲಯ ಪುಸ್ತಕಗಳ ಪ್ರದರ್ಶನ ನಡೆಯಿತು. ವಾಚನ ದಿನಾಚರಣೆಯಂಗವಾಗಿ ಪ್ರತಿಜ್ಞೆಯನ್ನು ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ವಾಚಿಸಿದರು.

        ಶಾಲಾ ಮುಖ್ಯ ಶಿಕ್ಷಕರ ಹೊಣೆಯನ್ನು ಹೊತ್ತಿರುವ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ನಯನ ಎಂ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶ್ವೇತ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
























No comments:

Post a Comment