ಭಾರತದ ಮೊದಲ ಉಪರಾಷ್ಟ್ರಪತಿಯಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯಾಗಿ ಇಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಂಗವಾಗಿ ಡಾ. ಎಸ್. ರಾಧಾಕೃಷ್ಣನ್ ರವರ ಜೀವನ ಸಾಧನೆಯನ್ನು ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಮಕ್ಕಳಿಗೆ ತಿಳಿಸಿದರು. ಬಿ. ಆರ್. ಸಿ ತರಬೇತುದಾರರಾದ ಶ್ರೀಮತಿ ಮೀನಾಕ್ಷಿ ಬೊಡ್ಡೋಡಿ ರವರು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯ ಐತಿಹ್ಯವನ್ನು ಮಕ್ಕಳಿಗೆ ತಿಳಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ನಯನ ಎಂ, ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ ಹಾಗೂ ಶಾಲಾ ಸಿಬ್ಬಂದಿ ಶ್ರೀಮತಿ ಜಲಜ ಪೊಯ್ಯೇಲ್ ಉಪಸ್ಥಿತರಿದ್ದರು. ಬಳಿಕ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.
No comments:
Post a Comment