FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 14 November 2023

ಹೇರಂಬ ಇಂಡಸ್ಟ್ರೀಸ್ ವತಿಯಿಂದ ಕೊಡುಗೈ ದಾನಿ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಹಾಗೂ ಶ್ರೀ ರಘುರಾಮ್ ಕೆ ಶೆಟ್ಟಿ ಕುಳೂರು ಕನ್ಯಾನ ಇವರಿಂದ ಶಾಲೆಗೆ ನೂತನ ಶಾಲಾ ವಾಹನ ಕೊಡುಗೆ:

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಈ ವರ್ಷ ಶತಮಾನೋತ್ಸವವನ್ನು ಆಚರಿಸುತ್ತಿದ್ದು ಪ್ರಯುಕ್ತ ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಹಾಗೂ ಶ್ರೀ ರಘುರಾಮ್ ಕೆ ಶೆಟ್ಟಿ ಕುಳೂರು ಕನ್ಯಾನರವರಿಂದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ವತಿಯಿಂದ ಶಾಲಾ ವಾಹನದ ಕೊಡುಗೆಯು ಹಸ್ತಾಂತರವು ಇಂದು ಶಾಲೆಯಲ್ಲಿ ನಡೆಯಿತು.

         ಸಮಾಜದಲ್ಲಿ ಹಲವಾರು ಕೊಡುಗೆಗಳನ್ನು ನೀಡಿ ಕೊಡುಗೈ ದಾನಿ ಎಂದೇ ಗುರುತಿಸಿಕೊಂಡಿರುವ ಶ್ರೀ ಸದಾಶಿವ ಕೆ ಶೆಟ್ಟಿ ಹಾಗೂ ಅವರ ಸಹೋದರ ಶ್ರೀ ರಘುರಾಮ್ ಕೆ ಶೆಟ್ಟಿ ಕುಳೂರು ಕನ್ಯಾನರವರು ತಮ್ಮ ಸಂಸ್ಥೆಯಾದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ವತಿಯಿಂದ ತಾವು ಕಲಿತಂತಹ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹಲವಾರು ಕೊಡುಗೆಗಳ ಜೊತೆಗೆ ಶತಮಾನೋತ್ಸವದ ಸವಿನೆನಪಿಗಾಗಿ ಶಾಲಾ ವಾಹನದ ಕೊಡುಗೆಯನ್ನು ನೀಡಿದ್ದು ಅದರ ಹಸ್ತಾಂತರವು ಇಂದು ಶಾಲೆಯಲ್ಲಿ ನಡೆಯಿತು. ನೂತನ ಶಾಲಾ ವಾಹನದ ಕೀ ಯನ್ನು ಅವರ ಮಾತೃಶ್ರೀಯಾದ ಶ್ರೀಮತಿ ಲೀಲಾವತಿ ಪಕೀರ ಶೆಟ್ಟಿ ಕುಳೂರು ಕನ್ಯಾನರವರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ರವರಿಗೆ ಹಸ್ತಾಂತರಿಸುವ ಮೂಲಕ ನೆರವೇರಿಸಿ ಶುಭ ಹಾರೈಸಿದರು.

        ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಸುಂದರಿ ಆರ್ ಶೆಟ್ಟಿ, ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮಹಮ್ಮದ್ ಹಾಜಿ ಕಂಚಿಲ, ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರ ಸಹೋದರರಾದ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮ, ಶಾಲಾ ರಕ್ಷಕ ಶ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಸತೀಶ್ ಎಲಿಯಾಣ, ಶತಮಾನೋತ್ಸವದ ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೆ ಪೊಯ್ಯೇಲು, ಶತಮಾನೋತ್ಸವದ ಸನ್ಮಾನ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ ಶೆಟ್ಟಿ ಚಾರ್ಲ, ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಶ್ರೀ ಹರಿರಾಮ ಕುಳೂರು, ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್, ಶತಮಾನೋತ್ಸವ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.




No comments:

Post a Comment