ಭಾರತದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆಯಾದ ಮಕ್ಕಳ ದಿನಾಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಮೀಂಜ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಸುಂದರಿ ಆರ್ ಶೆಟ್ಟಿಯವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿಯವರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಶತಮಾನೋತ್ಸವದ ಶಿಸ್ತು ಸಮಿತಿಯ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಸನ್ಮಾನ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಶ್ರೀ ಹರಿರಾಮ ಕುಳೂರು, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಚೈತ್ರ ಕಲ್ಕಾರ್ ಮೊದಲಾದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರಮೇಳ ಹಾಗೂ ಕಲೋತ್ಸವದಲ್ಲಿ ಮಿಂಚಿದ ಶಾಲಾ ಪ್ರತಿಭೆಗಳನ್ನು ಸ್ಮರಣೆಕೆ ನೀಡಿ ಅಭಿನಂದಿಸಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕಿಯರಾದ ಶ್ರೀಮತಿ ನಯನ ಎಂ ಹಾಗೂ ಶ್ರೀಮತಿ ಶ್ವೇತಾ ರವರು ನಿರ್ವಹಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಕಾರ್ಯಕ್ರಮ ಸಂಘಟಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment