FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 2 December 2023

ಮಂಜೇಶ್ವರ ಶಾಸಕರಿಂದ ಕುಳೂರು ಶಾಲಾ ನೂತನ ಕಟ್ಟಡದ ಉದ್ಘಾಟನೆ:

         ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಯೋಜನೆಯಡಿ ಮಂಜೂರಾಗಿ ನಿರ್ಮಾಣಗೊಂಡ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಅಡುಗೆ ಕೋಣೆ ಹಾಗೂ ಊಟದ ಸಭಾಂಗಣ ಕಟ್ಟಡದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಉದ್ಘಾಟನೆಯನ್ನು ಮಂಜೇಶ್ವರದ ಶಾಸಕರಾದ ಶ್ರೀ ಎ.ಕೆ.ಎಂ ಅಶ್ರಫ್ ರವರು ನೆರವೇರಿಸಿದರು.

         ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಸುಂದರಿ ಆರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಕಮಲಾಕ್ಷಿ, ಮಂಜೇಶ್ವರ ಬ್ಲಾಕ್ ಪಂಚಾಯತಿನ ಸದಸ್ಯೆಯಾದ ಶ್ರೀಮತಿ ಅಶ್ವಿನಿ ಎಂ.ಎಲ್ ಆಗಮಿಸಿದ್ದರು.  ಮೀಂಜ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀ ಜಯರಾಮ ಬಲ್ಲಂಗುಡೇಲ್, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿಯ ಅಧ್ಯಕ್ಷೆಯಾದ ಶ್ರೀಮತಿ ಸರಸ್ವತಿ ಕೆ,  ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಬಾಬು ಸಿ,  ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ರುಕ್ಯಾ ಸಿದ್ಧಿಕ್, ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ, ಮಂಜೇಶ್ವರ ಉಪಜಿಲ್ಲಾ ಪ್ರಭಾರ ಶಿಕ್ಷಣಾಧಿಕಾರಿಗಳಾದ ಶ್ರೀ ಜಿತೇಂದ್ರ ಎಸ್ ಎಚ್, ಮೀಂಜ ಪಂಚಾಯತ್ ಅಸಿಸ್ಟಂಟ್ ಎಂಜಿನಿಯರ್ ಶ್ರೀ ರೆಂಜಿ ಕ್ಸೇವಿಯರ್, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮ ಪಿ, ಶಾಲಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮಹಮ್ಮದ್ ಹಾಜಿ ಕಂಚಿಲ, ಮಾಜಿ ಸದಸ್ಯರು ಹಾಗೂ ಸಮಾಜ ಸೇವಕರಾದ ಶ್ರೀ ಮಹಮ್ಮದ್ ಕುಂಞಿ, ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ, ಪ್ರಿ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.

       ಇದೇ ಸಂದರ್ಭದಲ್ಲಿ ನೂತನ ಕಟ್ಟಡದ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನೆರವೇರಿಸಿದ ಬಿಲ್ಡಿಂಗ್ ಕಾಂಟ್ರಾಕ್ಟರ್ ಶ್ರೀ ಹುಸೇನ್ ಕುಂಞಿ ಹಾಗೂ ಪಿ.ಡಬ್ಲ್ಯೂ.ಡಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಶ್ರೀ ಗಿರೀಶ್ ಇವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

         ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸ್ವಾಗತಿಸಿ,  ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯರು, ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.









No comments:

Post a Comment