FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 5 June 2024

ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ :

         ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರವು ನೀಡಿದ ಸಮವಸ್ತ್ರದ ವಿತರಣೆ ಕಾರ್ಯಕ್ರಮ ನಡೆಯಿತು.

         ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿದರು‌. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.








ವಿಶ್ವ ಪರಿಸರ ದಿನಾಚರಣೆ :

        ಸರಕಾರಿ ಕಿರಿಯ ಪ್ರಾಥಮಿಕ ಶಾಲೆ‌ ಕುಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

        ಆ ಪ್ರಯುಕ್ತ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಪರಿಸರ ಗೀತೆ ಹಾಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಸಂಘಟಿಸಿದರು.



Monday 3 June 2024

ಕುಳೂರು ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರವೇಶೋತ್ಸವ :

      ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಆರಂಭದ ದಿನವನ್ನು ಶಾಲಾ ಪ್ರವೇಶೋತ್ಸವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.

       ರಾಜ್ಯದ ಮುಖ್ಯಮಂತ್ರಿ ಶ್ರೀ ಪಿನರಾಯಿ ವಿಜಯನ್ ರವರು ಉದ್ಘಾಟಿಸಿದ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವದ ಪ್ರಸಾರವನ್ನು ಮಾಡಲಾಯಿತು.

       ಬಳಿಕ ಶಾಲಾ ಮಟ್ಟದ ಪ್ರವೇಶೋತ್ಸವವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರುರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೀಂಜ ಗ್ರಾಮ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ ಕೆ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ನಾರಾಯಣ ನೈಕ್‌ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ ಹಾಗೂ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು.

      ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ‌ ಪ್ರಾಸ್ತಾವಿಕವಾಗಿ ಮಾತನಾಡಿದರು.

     ‌ಇದೇ ಸಂದರ್ಭದಲ್ಲಿ ಶಾಲೆಯ ನವಾಗತ ಮಕ್ಕಳಿಗೆ ವಿವಿಧ ಕೊಡುಗೆಗಳ ವಿತರಣೆ ನಡೆಯಿತು. ಪ್ರೀ ಪ್ರೈಮರಿ ಮಕ್ಕಳ ಸಮವಸ್ತ್ರವನ್ನು ಕೊಡುಗೆ ನೀಡಿದ ಗುಬ್ಯ ಶ್ರೀ ಶ್ರೀಧರ ಶೆಟ್ಟಿ, ಪಾಠಪುಸ್ತಕವನ್ನು ಕೊಡುಗೆ ನೀಡಿದ  ಶ್ರೀಮತಿ ವಿನಯ ಸೌಜನ್ ಹಾಗೂ ಪ್ರೀ ಪ್ರೈಮರಿ ಮತ್ತು ಒಂದನೇ ತರಗತಿ ಮಕ್ಕಳಿಗೆ ಬ್ಯಾಗ್ ಕೊಡುಗೆ ನೀಡಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರಿಗೆ ಶಾಲಾ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.

       ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

       ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.

      ಬಳಿಕ ನಡೆದ ರಕ್ಷಕರ ತರಬೇತಿಯನ್ನು ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ನಡೆಸಿಕೊಟ್ಟರು.

       ಶಾಲಾ ಶಿಕ್ಷಕಿಯರಾದ ಶ್ರೀಮತಿ  ಶ್ವೇತ ಇ, ಆಯಿಶತ್ ಸೆಯಿದ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀ ಸುಧಾಕರ್ ಶೆಟ್ಟಿ ಎಲಿಯಾಣ, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶ್ರೀ ಹರಿರಾಮ ಕುಳೂರು, ಶ್ರೀ ಚಂದ್ರಹಾಸ ಪೂಜಾರಿ ಕುಳೂರು, ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ರಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

      ಬಳಿಕ ಸಿಹಿತಿಂಡಿ ಹಾಗೂ ಮಧ್ಯಾಹ್ನದೂಟ ವಿತರಿಸಲಾಯಿತು.



















Monday 13 May 2024

ಕುಳೂರು ಶಾಲಾ ಶತಾಬ್ದಿ ಸಂಭ್ರಮ‌‌ದ ಸಮಾರೋಪ ಸಮಾರಂಭ‌ :

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂರನೇ ವಾರ್ಷಿಕ‌‌ 'ಶತಾಬ್ದಿ ಸಂಭ್ರಮ'ದ ಸಮಾರೋಪ ಸಮಾರಂಭ ನಿನ್ನೆ ಜರಗಿತು.

       ಬೆಳಿಗ್ಗೆ ಹಳೆ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ಕ್ರೀಡಾಕೂಟ ನಡೆಯಿತು. ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹಾಜಿ  ಕಂಚಿಲರವರು ವಹಿಸಿದ್ದರು.

      ಕಾರ್ಯಕ್ರದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು, ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿರವರು 'ಶಾಲೆಗಳಲ್ಲಿ‌ ಕಲಿತ ಮಕ್ಕಳಿಗೆ ಭದ್ರವಾದ ಅಡಿಪಾಯವನ್ನು‌ ಹಾಕಿ, ಎಲ್ಲರಲ್ಲೊಂದಾಗಿ ಬಾಳುವ, ಬದುಕುವ ಸಂಸ್ಕಾರವನ್ನು ಕಲಿಸಿ, ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಲು ಕುಳೂರಿನಂತಹ ಸರಕಾರಿ ಶಾಲೆಗಳೂ ಪ್ರಮುಖ ಪಾತ್ರ ವಹಿಸುತ್ತವೆ' ಎಂದರು.‌

       ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಎಸ್.ಎನ್.ಎಲ್. ನ ನಿವೃತ್ತ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನಾರಾಯಣ ಕಲ್ಯಾಣತ್ತಾಯ, ಖ್ಯಾತ ಸಾಹಿತಿ, ವಿಮರ್ಶಕ ರಾಧಾಕೃಷ್ಣ ಉಳಿಯತ್ತಡ್ಕ, ಮೀಂಜ ಪಿ.ಇ.ಸಿ. ಸೆಕ್ರೆಟರಿ ಹಾಗೂ ಮಜಿಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಬಂಗೇರ ಕೆ, ಮೀಯಪದವು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಜಾರಾಮ ರಾವ್ ಟಿ, ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ, ಶತಮಾನೋತ್ಸವ ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ ಸತ್ಯನಾರಾಯಣ ಶರ್ಮ, ಮಂಜೇಶ್ವರ ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಕಮಲಾಕ್ಷ ಡಿ, ಉದ್ಯಮಿ ಸೀತಾರಾಮ ಶೆಟ್ಟಿ ಮಾಣೂರು, ಎಕ್ಸ್ಪರ್ಟ್ ಕಾಲೇಜು ಮಂಗಳೂರು ಇದರ ಪ್ರಾಧ್ಯಾಪಕರಾದ ಬಾಲಕೃಷ್ಣ ಶೆಟ್ಟಿ ಎಲಿಯಾಣ, ಎಲ್.ಐ.ಸಿ. ಆಫ್ ಇಂಡಿಯಾದ ನಿವೃತ್ತ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸದಾಶಿವ ಶೆಟ್ಟಿ ಎಲಿಯಾಣ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಸಾಹಿತಿ ಕೆ.ಎ.ಎಂ. ಅನ್ಸಾರಿ, ಉದ್ಯಮಿ ಗೋಪಾಲಕೃಷ್ಣ ಶೆಟ್ಟಿ ಮೀಯಪದವು ಗುತ್ತು,  ಕತಾರ್ ನ ಅಲ್ಮನ ಗ್ರೂಪ್ ಆಫ್ ಕಂಪನಿಯ ಫೈನಾನ್ಸ್ ಮ್ಯಾನೇಜರ್ ಸಿ.ಎ‌. ಮನೋಜ್ ಶೆಟ್ಟಿ ಚಾರ್ಲ, ಯು‌ಕೆ. ಯ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್ ಡಾ. ಅಕ್ಷಯ್ ಕುಮಾರ್ ಎಲಿಯಾಣ, ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಉದ್ಯಮಿ ಜಗನ್ನಾಥ ಶೆಟ್ಟಿ ಕರಿಪ್ಪಾರ್ ಉಪಸ್ಥಿತರಿದ್ದರು.

         ಇದೇ ಸಂದರ್ಭದಲ್ಲಿ ಲವಾನಂದ ಎಲಿಯಾಣರವರ ಚೊಚ್ಚಲ ಕೃತಿ 'ನಗೆಮಲ್ಲಿಗೆ' ಲಲಿತ ಪ್ರಬಂಧವನ್ನು ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿರವರು ಬಿಡುಗಡೆಗೊಳಿಸಿದರು.

        ಶಾಲಾ ಹಳೆ ವಿದ್ಯಾರ್ಥಿ ಮನೋಜ್ ಶೆಟ್ಟಿ ಚಾರ್ಲ ಹಾಗೂ ಡಾ. ಅಕ್ಷಯ್ ಕುಮಾರ್ ಎಲಿಯಾಣರವರಿಗೆ ಶತಮಾನೋತ್ಸವ ಸಮಿತಿಯ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. 2023-24 ನೇ ಸಾಲಿನ ಎಲ್.ಎಸ್.ಎಸ್. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದ ಕುಮಾರಿ‌ ತನ್ವಿ ಎಸ್. ಪೂಜಾರಿ ಯವಳನ್ನು ಶತಮಾನೋತ್ಸವ ಸಮಿತಿಯ ಪರವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

         ಜೊತೆಗೆ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಪದಾಧಿಕಾರಿಗಳನ್ನು ಸ್ಮರಣಿಕೆ‌ ನೀಡಿ ಗೌರವಿಸಲಾಯಿತು.

       ಶತಮಾನೋತ್ಸವ ಪ್ರಯುಕ್ತ ನಡೆಸಿದ ಶಾಲಾ ಮಕ್ಕಳ ಕ್ರೀಡಾಕೂಟ ಹಾಗೂ ಹಳೆ ವಿದ್ಯಾರ್ಥಿಗಳು, ಊರವರ ಕ್ರೀಡಾಕೂಟದ ಬಹುಮಾನ ವಿತರಣೆ ಮಾಡಲಾಯಿತು.

         ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶತಮಾನೋತ್ಸವ ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಹರಿರಾಮ ಕುಳೂರು ವಂದಿಸಿದರು. ಕಾರ್ಯದರ್ಶಿ ಶಶಿಕುಮಾರ್ ಕುಳೂರು ಕಾರ್ಯಕ್ರಮ ನಿರೂಪಿಸಿದರು.

        ಶತಾಬ್ದಿ ಸಂಭ್ರಮದ ಸಮಾರೋಪ ಸಮಾರಂಭದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ನಡೆದವು. ಲವಾನಂದ ಎಲಿಯಾಣರ ಪ್ರಾಯೋಜಕತ್ವದಲ್ಲಿ ಡಾ. ರಾಜ್ ಕುಮಾರ್ ಹಿಟ್ಸ್ ರಸಮಂಜರಿ, ನವಯುವಕ ಕಲಾವೃಂದ ಚಿನಾಲ ಇವರ ಪ್ರಾಯೋಜಕತ್ವದಲ್ಲಿ ಡ್ಯಾನ್ಸ್ ಅಂಡ್ ಕಾಮಿಡಿ ಷೋ, ಶತಮಾನೋತ್ಸವ ಸಮಿತಿಯ ಪ್ರಾಯೋಜಕತ್ವದಲ್ಲಿ ರಂಗತರಂಗ ಕಾಪು ತಂಡದ ತುಳು ಸಾಂಸಾರಿಕ ಹಾಸ್ಯಮಯ ನಾಟಕ 'ಒರಿಯೆ' ಪ್ರದರ್ಶನಗೊಂಡಿತು.