ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶ ಮಾರ್ಗದ ನವೀಕರಣ ಕಾಮಗಾರಿಯ ಉದ್ಘಾಟನೆಯು ಇಂದು ನಡೆಯಿತು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಮಂಜೂರಾಗಿ ನವೀಕರಣವಾದ ಪ್ರವೇಶ ಮಾರ್ಗವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶತಮಾನೋತ್ಸವ ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲ್, ಸನ್ಮಾನ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಶ್ರೀ ಹರಿರಾಮ ಕುಳೂರು, ಆರೋಗ್ಯ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣವೇಣಿ ಕುಳುರು ಪಾದೆ, ಆಹಾರ ಸಮಿತಿ ಅಧ್ಯಕ್ಷರಾದ ಶ್ರೀ ರಘುರಾಮ ಶೆಟ್ಟಿ ಎಲಿಯಾಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.
No comments:
Post a Comment