FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 26 June 2024

ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ :

          ಕೇರಳದಲ್ಲಿ ಗ್ರಂಥಾಲಯಕ್ಕೆ ನಾಂದಿ ಹಾಡಿದ ಪಿ.ಎನ್. ಪಣಿಕ್ಕರ್ ರವರ ಚರಮ ದಿನಾಚರಣೆಯ ಭಾಗವಾಗಿ ಆಚರಿಸಿದ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. 

        ಆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಕಿ ಹಾಗೂ ಲೇಖಕಿಯೂ ಆಗಿರುವ ಶ್ರೀಮತಿ ಲಕ್ಷ್ಮೀ ವಿ ಭಟ್ ರವರು ಮಕ್ಕಳಿಗೆ ಶಿಶು ಗೀತೆಗಳನ್ನು ಹಾಡಿ ಮನರಂಜಿಸಿದರು. ಜೊತೆಗೆ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಗಮನ ಸೆಳೆದರು.

         ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲುರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಜತೆ ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಉಪಸ್ಥಿತರಿದ್ದು ಶುಭ ಹಾರೈಸಿದರು.

         ಇದೇ ಸಂದರ್ಭದಲ್ಲಿ ವಾರಾಚರಣೆಯ ಭಾಗವಾಗಿ ರಚನೆಯಾದ ಹಸ್ತಪತ್ರಿಕೆಯನ್ನು ಶ್ರೀಮತಿ ಲಕ್ಷ್ಮೀ ವಿ ಭಟ್ ರವರು ಬಿಡುಗಡೆಗೊಳಿಸಿದರು.

          ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ, ಆಯಿಶತ್ ಸೆಯಿದ ಸಹಕರಿಸಿದರು‌.

         ಶ್ರೀಮತಿ ಲಕ್ಷ್ಮೀ ವಿ ಭಟ್ ರವರು ಮಕ್ಕಳಿಗಾಗಿ ತಂದಿದ್ದ ಸಿಹಿತಿಂಡಿಯನ್ನು ಹಂಚಿದರು.












No comments:

Post a Comment