FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 26 June 2024

ವಿದ್ಯಾರಂಗ ಮತ್ತು ಬಾಲಸಭೆ ಉದ್ಘಾಟನೆ :

        ಶಾಲಾ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯಾದ ವಿದ್ಯಾರಂಗ ಮತ್ತು ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. 

      ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರುರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ಅಧ್ಯಕ್ಷತೆ ವಹಿಸಿದ್ದರು.

         ಕಾರ್ಯಕ್ರಮದಲ್ಲಿ ಶಿಕ್ಷಕಿ ಹಾಗೂ ಲೇಖಕಿ ಆಗಿರುವ ಶ್ರೀಮತಿ ಲಕ್ಷ್ಮೀ ವಿ ಭಟ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲುರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

       ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು.

      ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

      ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ, ಆಯಿಶತ್ ಸೆಯಿದ ಸಹಕರಿಸಿದರು‌.










No comments:

Post a Comment