ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಬಿ.ಆರ್.ಸಿ. ಯ ಸಿ.ಆರ್.ಸಿ. ಕೋರ್ಡಿನೇಟರ್ ಗಳಾದ ಶ್ರೀಮತಿ ಮೋಹಿನಿ, ಶ್ರೀ ನಾರಾಯಣ ರಾಜ್, ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಸತ್ಯನಾರಾಯಣ ಶರ್ಮ ಪಿ ರವರು ಪುಟಾಣಿ ಮಕ್ಕಳಿಗೆ ಹೂ ನೀಡಿ ಚಾಲನೆಯಿತ್ತರು.ಬಳಿಕ ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು, ಕರ್ನಾಟಕ ಜಾನಪದ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ರೀ ಪೃಥ್ವಿ ಜೆ ಶೆಟ್ಟಿ ಕುಂಬ್ಳೆ ಆಗಮಿಸಿದ್ದರು. ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಯುವ ಉದ್ಯಮಿ, ಶಾಲಾ ಹಳೆ ವಿದ್ಯಾರ್ಥಿಯೂ ಆದ ಶ್ರೀ ಮೋಹನ್ ಶೆಟ್ಟಿ ಮಜ್ಜಾರ್, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಅನುಪಮ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ನಯನ ಎಂ, ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ ಸಹಕರಿಸಿದರು.
No comments:
Post a Comment