ಇಂದು ನಮ್ಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಮೀಯಪದವು ಇದರ ನೇತೃತ್ವದಲ್ಲಿ ಕ್ರಿಸ್ಮಸ್ ರಜೆಯಲ್ಲಿ ನಡೆಯಲಿರುವ ಎನ್.ಎಸ್.ಎಸ್. ಸಹವಾಸ ಶಿಬಿರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿಸಲು ಸಂಘಟನಾ ರೂಪೀಕರಣ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಕೆ, ಕುಳೂರು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು , ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಭಾರ ಪ್ರಾಂಶುಪಾಲ ಶ್ರೀ ರಮೇಶ್ ಕೆ.ಎನ್, ಶ್ರೀ ವಿದ್ಯಾವರ್ಧಕ ಪ್ರೌಢ ಶಾಲೆ ಮೀಯಪದವು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಮೃದುಲ, ಕುಳೂರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಉಷ ಆದರ್ಶನಗರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀ ಇಬ್ರಾಹಿಂ ಹೊನ್ನಕಟ್ಟೆ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಅನುಪಮ ಚಿನಾಲ ಮೊದಲಾದವರು ಉಪಸ್ಥಿತರಿದ್ದರು.ಎನ್.ಎಸ್.ಎಸ್. ಸಹವಾಸ ಶಿಬಿರದ ಪ್ರೋಗ್ರಾಮ್ ಆಫೀಸರ್ ಹಾಗೂ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಧ್ಯಾಪಕರಾದ ಶ್ರೀ ರಾಜೇಂದ್ರನ್ ಕೆ.ಪಿ. ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಧ್ಯಾಪಕರಾದ ಶ್ರೀ ಹರೀಶ್ ಜಿ ಕಾರ್ಯಕ್ರಮವನ್ನು ಸಂಘಟಿಸಿದರು. ಆಶಾ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿ, ಎ.ಡಿ.ಎಸ್. ಕುಟುಂಬಶ್ರೀಯ ಶ್ರೀಮತಿ ಚಂದ್ರಾವತಿ ವಿ.ಪಿ, ಸಿ.ಡಿ.ಎಸ್. ಕುಟುಂಬಶ್ರೀಯ ಶ್ರೀಮತಿ ಕುಶಲಾಕ್ಷಿ, ಕುಳೂರು ಅಂಗನವಾಡಿ ಶಿಕ್ಷಕಿ ಶ್ರೀಮತಿ ವೇದಾವತಿ, ಕುಳೂರು ಶಾಲಾ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಕ್ಲಬ್ ಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
No comments:
Post a Comment