ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 67 ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಆ ಪ್ರಯುಕ್ತ ಧ್ವಜಾರೋಹಣವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರುರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಜತೆ ಕಾರ್ಯದರ್ಶಿಯಾದ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಶುಭ ಹಾರೈಸಿದರು.ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಹಾಗೂ ಊರವರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment